Tuesday, June 28, 2022

Latest Posts

ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರಗಳಿಗೆ ಬಿಜೆಪಿ ತಕ್ಕ ಉತ್ತರ ನೀಡಲಿದೆ: ಸಚಿವ ಕೆ.ಎಸ್. ಈಶ್ವರಪ್ಪ

ಹೊಸದಿಗಂತ ವರದಿ, ಶಿವಮೊಗ್ಗ:

ರಾಜ್ಯದಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿರುವ ಕುತಂತ್ರಗಳಿಗೆ ಬಿಜೆಪಿ ತಕ್ಕ ಉತ್ತರ ನೀಡಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡುವ ಮೂಲಕ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನ ಮಾಡುತ್ತಿವೆ. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯ ಉದ್ಧಟತನ ನಿಭಾಯಿಸುವ ಶಕ್ತಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಷ್ಟಪಡಿಸಿದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಪ್ರಕರಣದಲ್ಲಿ ಈಗಾಗಲೇ 27 ಜನರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಉದ್ಧವ ಠಾಕ್ರೆ ಮೇಲಿಂದ ಬಂದಿಲ್ಲ…
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಭಾಷೆ, ನೆಲ, ಜಲ ಹಾಗೂ ಮಹಾಪುರುಷರ ವಿಷಯದಲ್ಲಿ ರಾಜಕಾರಣ ಮಾಡಬಾರದು. ಉದ್ಧವ್ ಠಾಕ್ರೆ ಮೇಲಿಂದ ಇಳಿದು ಬಂದಿಲ್ಲ. ಎಂಇಎಸ್ ಕಿತಾಪತಿ ಕುರಿತು ಕಾಂಗ್ರೆಸ್ ಉತ್ತರ ನೀಡಬೇಕು. ಇಲ್ಲವಾದಲ್ಲಿ ಮಹಾರಾಷ್ಟ್ರದ ಸಿಎಂಗೆ ಪ್ರಧಾನಿ ಮೋದಿಯೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss