Wednesday, August 10, 2022

Latest Posts

ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವೆ: ಮುತಾಲಿಕ್

ಹೊಸ ದಿಗಂತ ವರದಿ, ವಿಜಯಪುರ:

ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ನಾನು ಬಿಜೆಪಿ ಟಿಕೆಟ್ ಬಯಸಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ
ಪ್ರಮೋದ ಮುತಾಲಿಕ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಚೆ ಹೊಂದಿದ್ದು, ಈ ಸಂಬಂಧ ನಾನು ಈಗಾಗಲೇ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ. ಇನ್ನು ಮೂರು ವರ್ಷ ಅವಧಿಯಲ್ಲಿ ನಾನು ಸೇವೆ ಸಲ್ಲಿಸಲು ಬಯಸಿದ್ದೇನೆ. ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ಕಲ್ಪಿಸಿ ಕೊಡಬೇಕು. ಒಂದು ವೇಳೆ ನನಗೆ ಅವಕಾಶ ಕೊಡದಿದ್ದರೂ ನಾನು ಬಿಜೆಪಿ ಗೆಲುವಿಗೆ ಶ್ರಮಿಸುತ್ತೇನೆ. ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss