ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 3 ರಂದು ಆರಂಭವಾಗಬೇಕಿದ್ದ ಪಾದಯಾತ್ರೆ ವಿಚಾರದಲ್ಲಿ ಉಂಟಾಗಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಗೊಂದಲ ನಿವಾರಣೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಭೇಟಿಯಾಗಿ ಸಂಧಾನ ಸಭೆ ನಡೆಸಿದ್ದಾರೆ.
ಸಂಸತ್ ಭವನದಲ್ಲಿರುವ ಕುಮಾರಸ್ವಾಮಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್, ರಾಜ್ಯ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು. ಪ್ರೀತಂ ಗೌಡ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಿಲ್ಲ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಮನವರಿಕೆ ಮಾಡಿದೆ. ಇದಕ್ಕೆ ಕುಮಾರಸ್ವಾಮಿ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಸಚಿವ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪ್ರೀತಂ ಗೌಡ ನಮಗೆ ಸಮಸ್ಯೆಯಲ್ಲ ಎಂದು ಸಭೆಯ ನಂತರ ಕುಮಾರಸ್ವಾಮಿ ಪ್ರತ್ಯೇಕವಾಗಿ ಹೇಳಿದರು. ಈ ರ್ಯಾಲಿಯನ್ನು ಬಿಜೆಪಿಯ ಕಾರ್ಯಕ್ರಮದ ರೀತಿಯಲ್ಲಿ ಬಿಂಬಿಸುವುದಕ್ಕೆ ಹೋಗಿದ್ದರು. ಇದನ್ನೆಲ್ಲ ಕೂತು ಬಗೆಹರಿಸಿಕೊಳ್ಳುವ ಕೆಲಸವಾಗಿದೆ ಎಂದರು.