ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸುರಂಗ ರಸ್ತೆ (ಟನಲ್ ರೋಡ್) ಯೋಜನೆ ನಿರ್ಮಾಣ ವಿರೋಧಿಸಿ ಲಾಲ್‌ಬಾಗ್‌ನಲ್ಲಿ ಇದೇ ನವೆಂಬರ್ 2ರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ.
‘ಲಾಲ್‌ಬಾಗ್ ಉಳಿಸಿ, ಬೆಂಗಳೂರು ರಕ್ಷಿಸಿ’ ಎಂಬ ಘೋಷಣೆಯಡಿ ಬಿಜೆಪಿ ವತಿಯಿಂದ ಹಲವಾರು ಸಂಘಟನೆಗಳ ಜೊತೆಗೂಡಿ ಈ ಪ್ರತಿಭಟನೆ ನಡೆಸಲಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
”ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು” ಎಂದು ಆರ್.ಅಶೋಕ್ ಆರೋಪಿಸಿದರು.

