ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ: ಸಚಿವ ವಿ.ಸೋಮಣ್ಣ

ದಿಗಂತ ವರದಿ ಮೈಸೂರು:

ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ ಎಂದು ವಸತಿ ಸಚಿವ ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ಕುಟುಂಬ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಶ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಬಂದಿರುವ ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಉಪಚುನಾವಣೆಯನ್ನು ನಾವು ಗೆಲ್ಲುತ್ತೇವೆ. ಹಣ ಹಂಚಿ ಉಪಚುನಾವಣೆಯನ್ನು ಬಿಜೆಪಿಯವರು ಗೆಲ್ಲುತ್ತಿದ್ದಾರೆ ಎಂದು ಕಾಂಗ್ರೆಸ್‌ನವರು ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಪ್ರಚಾರಕ್ಕಾಗಿ ಈ ರೀತಿಯ ಆರೋಪ ಮಾಡುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರ ಇದ್ದಾಗ ನಾವು ಆರೋಪ ಮಾಡಿದ್ದೆವು. ಈಗ ಅವರು ಆರೋಪ ಮಾಡುತ್ತಿದ್ದಾರೆ. ಶುಕ್ರವಾರ ಕಾಂಗ್ರೆಸ್‌ನವರು ನನ್ನ ಜೊತೆಯಲ್ಲೆ ಇದ್ದರು. ಆಗ ನೇರವಾಗಿ ನನ್ನ ಬಳಿ ಹೇಳಲಿಲ್ಲ. ಈಗ ಮಾಧ್ಯಮಗಳಲ್ಲಿ ಆ ರೀತಿ ಹೇಳಿಕೆ ನೀಡಬಾರದು.
ದುಡ್ಡು ಕೊಟ್ಟು ಮತ ಹಾಕಿಸಿಕೊಳ್ಳುವ ಕಾಲ ಈಗ ಇಲ್ಲ ಎಂದು ಕಾಂಗ್ರೆಸ್‌ನವರಿಗೆ ತಿರುಗೇಟು ನೀಡಿದರು
ಐದು ದಿನಗಳಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಂದ ಗುಣಮುಖರಾಗುತ್ತಾರೆ. ಆ ನಂತರ ಸರ್ವ ಪಕ್ಷದ ಸಭೆ ಕರೆಯುತ್ತಾರೆ.
ಉಪಚುನಾವಣೆಗೆ ಪ್ರಚಾರ ಮುಗಿದ ಬಳಿಕ ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿದೆ. ನನ್ನ ಜೊತೆ ಬಂದವರು ಪರೀಕ್ಷೆಗೆ ಒಳಗಾಗಿದ್ದು, ಅವರ ವರದಿ ಕೂಡ ನೆಗೆಟಿವ್ ಬಂದಿದೆ.
ನಮ್ಮ ಸಿಬ್ಬಂದಿ ವರ್ಗದವರಿಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಿದ್ದೇನೆ. ಈಗಿನ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಅವಶ್ಯಕತೆ ಇದೆ. ಮುಖ್ಯಮಂತ್ರಿಗಳು ಕೊರೊನಾ ನಿಯಂತ್ರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್ ಸ್ವಲ್ಪ ಹತೋಟಿಗೆ ತರಬೇಕಿದೆ. ಅದನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ ಎಂದು ತಿಳಿಸಿದರು.
ಕೊರೋನಾ ಬಗ್ಗೆ ಯಾರು ಗಾಬರಿಯಾಗುವ ಅಗತ್ಯವಿಲ್ಲ. ನಿಮ್ಮ ಆತಂಕದಿAದ ಸಮಸ್ಯೆ ಉಂಟಾಗುತ್ತದೆ. ಎಲ್ಲರೂ ಜಾಗೃತರಾಗಿರಿ ಎಂದು ಸಲಹೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss