ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಸರ್ಕಾರವನ್ನು ಅನೈತಿಕ ಮಾರ್ಗಗಳ ಮೂಲಕ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ಪಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬಿಜೆಪಿಯವರು ಬಹುಮತ ಪಡೆಯೋದಕ್ಕಾಗಿ ಶಾಸಕರ ಖರೀದಿಗೆ ಇಳಿದಿದ್ದಾರೆ. ಜನ ನಮ್ಮ ಮೇಲೆ ನಂಬಿಕೆ ಇಟ್ಟು ಸರ್ಕಾರ ರಚನೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಆದರೆ ಬಿಜೆಪಿ ಚುನಾಯಿತ ಸರ್ಕಾರವನ್ನೇ ಬೀಳಿಸುವ ಪ್ರಯತ್ನದಲ್ಲಿದೆ. ಚುನಾವಣೆ ಬಗ್ಗೆ ಜನರಿಗೆ ನಂಬಿಕೆಯೇ ಹೋಗಲಿದೆ ಎಂದಿದ್ದಾರೆ.