ಹೈದರಾಬಾದ್‌ನಲ್ಲಿ‌ ಮೋದಿ: ಎಲ್ಲರ ಚಿತ್ತ ಈಗ ಪರೇಡ್ ಮೈದಾನದತ್ತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಶನಿವಾರ ಹೈದರಾಬಾದ್‌ಗೆ ಬಂದಿಳಿದಿದ್ದಾರೆ.  ಇಂದು ಸಂಜೆ ಸಿಕಂದರಾಬಾದ್ ಪರೇಡ್ ಮೈದಾನದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಭೆ ನಡೆಯಲಿದೆ. ಸಭೆಯಲ್ಲಿ  ತೆಲಂಗಾಣ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಿದ್ಧತೆಗೆ ಮಾರ್ಗಸೂಚಿ ನೀಡಲಿದ್ದಾರೆ. ತಮ್ಮ ಭಾಷಣದ ಸಮಯದಲ್ಲಿ, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹೇಗೆ ಕೆಲಸ ಮಾಡಬೇಕೆಂಬುದರ ಬಗ್ಗೆ ಸಲಹೆಗಳನ್ನು ನೀಡುವ ಸಾಧ್ಯತೆಯಿದೆ. ಇದರ ಜೊತೆಗೆ ಸರ್ಕಾರದ ಕೆಲವು ಯೋಜನೆಗಳ ಬಗ್ಗೆ ಬೆಳಕು ಚೆಲ್ಲುವ ನಿರೀಕ್ಷೆಯಿದೆ.

ಈ ಸಭೆಗೆ ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆಯಿಂದ  3 ವೇದಿಕೆಗಳನ್ನು ಸಿದ್ಧಪಡಿಲಾಗಿದೆ. ಪ್ರಧಾನ ವೇದಿಕೆಯಲ್ಲಿ ಮೋದಿ ಮತ್ತು ಜೆಪಿ ನಡ್ಡಾ ಅವರೊಂದಿಗೆ ಇನ್ನಿಬ್ಬರು ಪ್ರಮುಖ ನಾಯಕರು ಮಾತ್ರ ಇರಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಇತರೆ ವೇದಿಕೆಗಳಿವೆ. ಈ ಸಭೆಯಲ್ಲಿ ಸುಮಾರು 10 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಮಳೆ ಬಂದರೂ ಸಭೆಗೆ ಬರುವವರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಎಲ್ಲ ವಿಧಾನಸಭಾ ಕ್ಷೇತ್ರ ಹಾಗೂ ಶಕ್ತಿ ಕೇಂದ್ರಗಳ ಮಟ್ಟದಲ್ಲಿ ಪೂರ್ವಸಿದ್ಧತಾ ಸಭೆಗಳನ್ನು ನಡೆಸಲಾಗಿದೆ. ಕಾರ್ಯಕರ್ತರ ಮಟ್ಟದಿಂದ ಹಿಡಿದು ಕೆಳಹಂತದ ನಾಯಕರವರೆಗೂ ಎಲ್ಲರೂ ಪರೇಡ್ ಮೈದಾನದಲ್ಲಿ ಸೇರಲು ತಿಳಿಸಲಾಗಿದೆ.

ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಭಾಗವಹಿಸುತ್ತಿರುವ ಈ ಸಭೆಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ   3 ಸಾವಿರ ಪೊಲೀಸರ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!