Friday, March 24, 2023

Latest Posts

ಬೀದರ್ ನಲ್ಲಿ ಅದ್ದೂರಿಯಾಗಿ ನಡೆಯಿತು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ!

ಹೊಸದಿಗಂತ ವರದಿ, ಬೀದರ್:

ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಶನಿವಾರ ವಿಜಯ ಸಂಕಲ್ಪ ಯಾತ್ರೆ ಭಾರತೀಯ ಜನತಾ ಪಕ್ಷ ನಡೆಸದರು.

ರೋಡ್ ಶೋ ಎರಡು ಗಂಟೆ ತಡವಾಗಿ ಆರಂಭವಾಯಿತು. ಮಧ್ಯಾಹ್ನ 1 ಗಂಟೆಗೆ ಬಿಜೆಪಿ ನಾಯಕರು  ಅಮರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರೋಡ್ ಶೋದಲ್ಲಿ ಪಾಲ್ಗೊಂಡು ಪ್ರಚಾರಕ್ಕೆ ಆರಂಭಿಸಿದರು. ಪಟ್ಟಣದ ಬಸವೇಶ್ವರ ವೃತ್ತ, ಬಸ್ ನಿಲ್ದಾಣ ಮೂಲಕ ಕನ್ನಡಾಂಬೆ ವೃತ್ತದ ವರೆಗೆ ನಡೆದ ರೋಡ್ ಶೋನಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಸ್ತೆ ಉದ್ದಕ್ಕೂ ಬಿಜೆಪಿ ಧ್ವಜ, ಬ್ಯಾನರ್ ಹಾಕಲಾಗಿತ್ತು, ಬಂಜಾರಾ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ನೃತ್ಯ ಮಾಡಿದರು, ವಿವಿಧ ಕಲಾ ತಂಡಗಳು ನೃತ್ಯ ಮಾಡುವ ಮೂಲಕ ಯುವಕರು ಕುಣಿದು ಕುಪ್ಪಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!