ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಇಂದು ಸಂಜೆಯವರೆಗೂ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು, ಬಜೆಪಿ ಮುಖಂಡರು ಉಪಸ್ಥಿತರಿದ್ದಾರೆ. ಕಾಂಗ್ರೆಸ್‌ನವರು ಹೇಳಿದ್ದಂತೆಯೇ ನಡೆದುಕೊಂಡಿದ್ದಾರೆ ಎನ್ನುವ ರೀತಿ ಕಾಣಿಸೋ ಹಾಗೆ ನಡೆದುಕೊಳ್ತಿದ್ದಾರೆ. ಆದರೆ ಅವರು ಹೇಳಿದ್ದಂತೆ ನಡೆದುಕೊಂಡಿಲ್ಲ, ಷರತ್ತುಗಳಿಲ್ಲದ ಗ್ಯಾರೆಂಟಿಗಳು ಜಾರಿಯಾಗಬೇಕು ಎಂದು ಬಿಎಸ್‌ವೈ ಹೇಳಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುವುದು ಬೇಡ, ಗೋಹತ್ಯೆ ನಿಷೇಧ ಕಾಯ್ದೆ ವಾಪಾಸ್ ಪಡೆಯುವುದು ಬೇಡ ಹಾಗೂ ಮಹಿಳಾ ಸ್ವಸಹಾಯ ಸಂಘದ ಸಾಲಮನ್ನಾ ಆಗಬೇಕು ಎಂದು ಹೇಳಿದ್ದಾರೆ.
ಪ್ರತಿಭಟನೆ ವೇದಿಕೆಯಲ್ಲಿ ಡಿ.ವಿ. ಸದಾನಂದಗೌಡ, ಕೆ.ಎಸ್. ಈಶ್ವರಪ್ಪ. ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಬಿ.ಸಿ. ಪಾಟೀಲ್, ಕೆ.ಸಿ. ನಾರಾಯಣಗೌಡ, ಮುರುಗೇಶ್ ನಿರಾಣಿ, ಎನ್. ಮಹೇಶ್ ಸೇರಿದಂತೆ ಹಲವು ನಾಯಕರು ಇದ್ದಾರೆ.