ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ: ವಿಜಯೇಂದ್ರ ಸೇರಿ ಹಲವು ನಾಯಕರು ಪೊಲೀಸ್‌ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣ ಪ್ರಕರಣ ಸಂಬಂಧ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಸಮರವನ್ನು ಮುಂದುವರೆಸಿದೆ.

ಹಗರಣ ಹಾಗೂ ಅಕ್ರಮ ಪ್ರಕರಣಗಳ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣವನ್ನ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಯಿತು.

ಈ ನಡುವೆ ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ ಬಿವೈ ವಿಜಯೇಂದ್ರ ಸೇರಿ ಹಲವು ನಾಯಕರುತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!