ಮುಸ್ಲಿಂರ ಮೀಸಲಾತಿಯನ್ನು ರದ್ದುಗೊಳಿಸಲಿದೆ ಬಿಜೆಪಿ: ಅಮಿತ್ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತೆಲಂಗಾಣದಲ್ಲಿ ಬಿಜೆಪಿ ಮುಸ್ಲಿಂರ ಮೀಸಲಾತಿಯನ್ನು ಅಂತ್ಯಗೊಳಿಸಲಿದ್ದು, ಈ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಟಿಆರ್ ಎಸ್ ಸರ್ಕಾರ ಜಾರಿಗೆ ತಂದಿದ್ದ ಮುಸ್ಲಿಂರ ಮೀಸಲಾತಿಯನ್ನು ಅಂತ್ಯಗೊಳಿಸಿ, ಎಸ್ ಸಿ, ಎಸ್ ಟಿ ಮತ್ತು ಒಬಿಸಿಗಳಿಗೆ ಮೀಸಲಾತಿ ಒದಗಿಸಲು ಬಿಜೆಪಿ ನಿರ್ಧರಿಸಿದೆ ಎಂದರು.

ಮುಸ್ಲಿಂರಿಗೆ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಶೇ. 4 ರಷ್ಟು ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕಳೆದ ವಾರ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ವಾಗ್ದಾಳಿ ನಡೆಸಿದ ಶಾ , ಕಾಂಗ್ರೆಸ್ ತೆಲಂಗಾಣವನ್ನು ದೆಹಲಿಯ ಎಟಿಎಂ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಎಂದು ಅವರು ಹೇಳಿದರು.

ಟಿಆರ್‌ಎಸ್ ಮತ್ತು ಕಾಂಗ್ರೆಸ್ ಎರಡೂ ಒಟ್ಟಿಗೆ ಇವೆ. ತೆಲಂಗಾಣವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಮೋದಿಜಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಮತ್ತು ಟಿಆರ್‌ಎಸ್ ಎರಡೂ ಮಜ್ಲಿಸ್ (ಎಐಎಂಐಎಂ) ಗೆ ಹೆದರಿ ತೆಲಂಗಾಣ ವಿಮೋಚನಾ ದಿನವನ್ನು ಆಚರಿಸಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಸೆಪ್ಟೆಂಬರ್ 17 ಅನ್ನು ತೆಲಂಗಾಣ ವಿಮೋಚನಾ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ ಜನರು ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!