ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮೈಸೂರು:
ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ಗೆ ಶೀಘ್ರದಲ್ಲೇ ಚುನಾವಣೆ ನಡೆಯಲಿದ್ದು, ಎಲ್ಲಾ ಸ್ಥಾನಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಸುತ್ತೂರು ಮಠಕ್ಕೆ ಆಗಮಿಸಿದ ಅವರು, ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿಗಳನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ನಮ್ಮ ಮುಂದೆ ಎರಡು ಚುನಾವಣೆಗಳು ಇವೆ. ಒಂದು ಜಿ.ಪಂ, ತಾ.ಪಂ ಚುನಾವಣೆ ಹಾಗೂ ಇನ್ನೊಂದು ವಿಧಾನಪರಿಷತ್ ಚುನಾವಣೆ. ಇವೆರಡು ಚುನಾವಣೆಗಳಿಗೆ ಬಿಜೆಪಿ ಸಿದ್ಧವಾಗುತ್ತಿದೆ.ಹೀಗಾಗಿ ರಾಜ್ಯಾದ್ಯಂತ ಪೂರ್ವಭಾವಿ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದ್ದೇವೆ. ಇಂದು ಮೈಸೂರಿನಲ್ಲಿ ಕಾರ್ಯಕಾರಣಿ ಸಭೆ ಮಾಡಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾ ಪಂಚಾಯತ್ ಗಳಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ವಿಶ್ವಾಸವಿದೆ ಎಂದರು.
ಕೆಆರ್ಎಸ್ ಡ್ಯಾಂ ಬಿರುಕು ವಿಚಾರದಲ್ಲಿ ವೈಯಕ್ತಿಕವಾದಂತಹ ಹೇಳಿಕೆಗಳು ಕೊಡುವ ಮುನ್ನ ವೈಚಾರಿಕ ಸಮಸ್ಯೆಗಳ ವಿಚಾರದ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ವ್ಯಕ್ತಿಗತ ಆಧಾರದ ಮೇಲೆ ಮಾತನಾಡೋದು ಸರಿಯಲ್ಲ. ಇದೆಲ್ಲವನ್ನೂ ಸರ್ಕಾರ ಗಮನಿಸಿದೆ ಸರ್ಕಾರವೇ ಕ್ರಮ ಕೈಗೊಳ್ಳಲಿದೆ ಎಂದರು.ಈ ವೇಳೆ ಬಿಜೆಪಿ ಮೈಸೂರು ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರರು ಉಪಸ್ಥಿತರಿದ್ದರು.