ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದು, ಮತ್ತೆ ಅಧಿಕಾರದ ಗದ್ದುಗೆ ಏರುವ ನಿರೀಕ್ಷೆಯಲ್ಲಿದ್ದಾರೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್.
ಪ್ರಸ್ತುತ 40 ಸದಸ್ಯ ಬಲದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಮುನ್ನಡೆಸುವ ಮೂಲಕ ಸರ್ಕಾರ ರಚಿಸಲಿದೆ. ರಾಜ್ಯದಲ್ಲಿ ಬಿಜೆಪಿ ಎಂಜಿಪಿ ಪಕ್ಷದೊಂದಿಗೆ ಮೃತ್ರಿ ಮಾಡಿಕೊಂಡು ಸರ್ಕಾರ ರಚಸಿಕೊಳ್ಳಲಿದೆ ಎಂದು ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಗೋವಾ ಬಿಜೆಪಿ ನಾಯಕರು ಇಂದು ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರನ್ನು ಭೇಟಿ ಮಾಡಲಿದ್ದಾರೆ.
ಇನ್ನು ಮುಖ್ಯಮಂತ್ರಿ ಪ್ರಮೋದ್ ಸಾವಂತ್ 650 ವೋಟ್ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧರ್ಮೇಶ್ ಸಗ್ಲಾನಿ ಅವರನ್ನು ಸೋಲಿಸಿದ್ದಾರೆ.