ಅ.30 ರಂದು ಕಲಬುರಗಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ: ವಿವೇಕಾನಂದ ಡಬ್ಬಿ

ದಿಗಂತ ವರದಿ ವಿಜಯಪುರ:

ಕಲಬುರಗಿಯಲ್ಲಿ ಅ. 30 ರಂದು ಬಿಜೆಪಿ ಹಿಂದುಳಿದ ವರ್ಗಗಳ ಬೃಹತ್ ವಿರಾಟ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲಬುರಗಿ ವಿರಾಟ್ ಜನ ಜಾಗೃತಿ ಸಮಾವೇಶಕ್ಕೆ ವಿಜಯಪುರ ಜಿಲ್ಲೆಯಿಂದ 50 ಸಾವಿರ ಜನ ಕಾರ್ಯಕರ್ತರನ್ನು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಭಾಗವಹಿಸಳಿದ್ದು, ಇದೊಂದು ತಾಯಂದಿಯರ ಕಾರ್ಯಕ್ರಮವಾಗಲಿದೆ ಎಂದರು.

ಜಿಲ್ಲೆಯ ಎಲ್ಲ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕಲಬುರಗಿಯಲ್ಲಿ ಸುಮಾರು 200 ಎಕರೆ ವಿಸ್ತಾರವಾದ ಜಾಗದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಹಿಂದುಳಿದ ವರ್ಗ, ದಲಿತ ಹಾಗೂ ಬಡವರು ಸೇರಿದಂತೆ ಅನೇಕ ಸಮುದಾಯಗಳಿಗೆ ಸರ್ಕಾರ ಒದಗಿಸಿರುವ ಸೌಲಭ್ಯಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗುವ ಬೃಹತ್ ಸಮಾವೇಶ ಇದಾಗಲಿದೆ ಎಂದರು.

ಈ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚವ್ಹಾಣ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದರು.

ಇಲ್ಲಿನ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೇದ್ದಿರುವ ಚುನಾವಣಾ ಆಕಾಂಕ್ಷಿಗಳಿಗೆ ನಮ್ಮ ಜಿಲ್ಲಾಧ್ಯಕ್ಷರು ತಿಳಿ ಹೇಳಿದ್ದಾರೆ. ಆದರೂ ಕೆಲವರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದಾರೆ. ಅಂತಹವರ ವಿರುದ್ಧ ಪಕ್ಷದ ಜಿಲ್ಲಾಧ್ಯಕ್ಷರು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಾಬು ಮಾಶಾಳಕರ, ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!