Saturday, April 1, 2023

Latest Posts

ಬಿಜೆಪಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ : ಬಿಎಸ್‌ವೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಸವಕಲ್ಯಾಣ ಹೇಗಿತ್ತು? ಈಗ ಹೇಗೆ ಆಗಿದೆ? ಎಷ್ಟೆಲ್ಲಾ ಅಭಿವೃದ್ಧಿ ಆಗಿದೆ, ಇದಕ್ಕೆಲ್ಲಾ ಬಿಜೆಪಿ ಕಾರಣ. ಮೋದಿಜಿ, ಅಮಿತ್ ಶಾಜಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ.ಅದಕ್ಕೆ ನಿಮ್ಮ ಬೆಂಬಲ ಇರಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆಯಲ್ಲಿ ಮಾತನಾಡಿ, 4 ರಥಗಳು 224 ಕ್ಷೇತ್ರಗಳಿಗೆ ಭೇಟಿ ಕೊಡಲಿವೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ಬೃಹತ್ ಸಭೆ ನಡೆಯಲಿದೆ. ಮಹಾನ್ ನಾಯಕ ನರೇಂದ್ರ ಮೋದಿಜಿ ಅವರು ಬರಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಸಹ ಉಸ್ತುವಾರಿ ಶ್ರೀಮತಿ ಡಿ.ಕೆ.ಅರುಣಾ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಸಚಿವ ಪ್ರಭು ಚೌಹಾಣ್, ಸಂಸದ ಉಮೇಶ್ ಜಾಧವ್, ಶಾಸಕ ರಘುನಾಥ ಮಲ್ಕಾಪುರೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಶಾಸಕ ಶರಣು ಸಲಗರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ರಾಜ್ಯ- ಜಿಲ್ಲೆ, ಸ್ಥಳೀಯ ಮುಖಂಡರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!