Thursday, March 23, 2023

Latest Posts

ಕಲ್ಯಾಣ ಕನಾ೯ಟಕದಲ್ಲಿ ಬಿಜೆಪಿಗೆ 30 ಸ್ಥಾನ ಗೆಲ್ಲಿಸಿ: ಯಡಿಯೂರಪ್ಪ ಕರೆ

ಹೊಸ ದಿಗಂತ ವರದಿ, ಕಲಬುರಗಿ:

ಕಲ್ಯಾಣ ಕನಾ೯ಟಕ ಭಾಗದ ಒಟ್ಟು 41 ಮತಕ್ಷೇತ್ರದಲ್ಲಿ ಬಿಜೆಪಿ ಗೆ ಕನಿಷ್ಠ 30 ಸ್ಥಾನ ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಅವರು ಸೋಮವಾರ ಜಿಲ್ಲೆಯ ಆಳಂದ ತಾಲೂಕಿನ ಶ್ರೀ ರಾಮ ಮಾರುಕಟ್ಟೆ ಪ್ರಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ್ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷದ ಕಾಯ೯ಕತ೯ರು ಮನಸ್ಸು ಮಾಡಿದರೇ, ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಎಲ್ಲಾ ಕ್ಷೇತ್ರ ಗಳಲ್ಲಿ ಬಿಜೆಪಿ ಬಾವುಟ ಹಾರಿಸಲು ಸಾಧ್ಯವಿದೆ.ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಿಳಿಸುವಂತಹ ಕೆಲಸ ತಾವು ಮಾಡಬೇಕಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಕನಾ೯ಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬಿಜೆಪಿ ಗೆ ಬೆಂಬಲ ನೀಡುವುದು ಅನೀವಾಯ೯ವಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ,140ಕ್ಕಿಂತ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆ ಸಿಗುವ ಹಾಗೇ ಸಂಚಾರ ಮಾಡಲಿದ್ದೇನೆ ಎಂದರು.

ಅಪರೂಪದ ಶಾಸಕ

ಆಳಂದ ಕ್ಷೇತ್ರದ ಶಾಸಕ ಸುಭಾಷ್ ಗುತ್ತೇದಾರ ಒಬ್ಬ ಅಪರೂಪದ ಶಾಸಕರಾಗಿದ್ದಾರೆ.ದಿನದ 24 ಗಂಟೆಗಳ ಕಾಲಗಳಲ್ಲಿ 18 ತಾಸು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶ್ರಮಿಸುತ್ತಿದ್ದಾರೆ. ಬರುವ ಚುನಾವಣೆಯಲ್ಲಿ 35 ರಿಂದ 40 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರಬೇಕು. ನಾನು ವಿಜಯೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!