Friday, March 5, 2021

Latest Posts

ಗುಜರಾತ್​​ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಸಂತಸ ವ್ಯಕ್ತಪಡಿಸಿದ ಕಟೀಲ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗುಜರಾತ್​​ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಿರುವುದಕ್ಕೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಚುನಾವಣೆಯ ಮೂಲಕ ಗುಜರಾತ್ ರಾಜ್ಯವು ಬಿಜೆಪಿ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದ್ದು, . ಕೃಷಿ ಸುಧಾರಣಾ ಮಸೂದೆಗಳು, 370ನೇ ವಿಧಿ ರದ್ಧತಿ, ಶ್ರೀರಾಮ ಮಂದಿರದ ನಿರ್ಮಾಣ, ತ್ರಿವಳಿ ತಲಾಖ್ ರದ್ದು ಮಾಡಿದ ಕೇಂದ್ರದ ನಿರ್ಧಾರವನ್ನು ಜನರು ಬೆಂಬಲಿಸಿದ್ದಾರೆ. ಅಲ್ಲದೆ, ಒಂದೇ ಕುಟುಂಬ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ ಎಂದು ಕಟೀಲ್ ಹೇಳಿದರು.
ಇದು ಗುಜರಾತ್ ರಾಜ್ಯದ ಜನತೆಗೆ ಸಂದ ಜಯವಾಗಿದೆ. ಜಯ ಗಳಿಸಿದ ಅಭ್ಯರ್ಥಿಗಳನ್ನು ಅಭಿನಂದನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರ ನೇತೃತ್ವ ಮತ್ತು ಕಾರ್ಯಕ್ರಮಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿರುವುದು ಇದರಿಂದ ಸ್ಪಷ್ಟವಾಗಿದೆ ಎಂದಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss