ಗುಜರಾತ್ ನಲ್ಲಿ ಬಿಜೆಪಿ ಗೆಲುವು: ವಿಜಯಪುರ ನಗರದಲ್ಲಿ ವಿಜಯೋತ್ಸವ

ಹೊಸದಿಗಂತ ವರದಿ, ವಿಜಯಪುರ:

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭ ಬಿಜೆಪಿ ಮುಖಂಡರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ ಪರ ಘೋಷಣೆ ಕೂಗಿದರು.
ಇದು ಪ್ರತಿಯೊಬ್ಬ ಕಾರ್ಯಕರ್ತನ ಗೆಲುವು ಎಂದು ಹೇಳಿದರು.

ಇದೇ ಸಂದರ್ಭ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!