ಉಳ್ಳಾಲದಲ್ಲಿ ಬಿಜೆಪಿ ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಹೊಸದಿಗಂತ ವರದಿ ಮಂಗಳೂರು:

ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ಬು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಜೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು.

ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಙದ ತೊಕ್ಕುಟ್ಟು ಜಂಜ್ಷನ್ ವರೆಗೆ ಬಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ತೊಕ್ಕೊಟ್ಟಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಉಳ್ಳಾಲ ಕ್ಷೇತ್ರದಲ್ಲಿ ಅಬ್ಬಕ್ಕ ಭವನ ನಿರ್ಮಾಣಕ್ಕೆ ಬಿಜೆಪಿ ಸರಕಾರ ಅನುದಾನ ಬಿಡುಗಡೆ ಮಾಡಿತ್ತು ಆದರೆ ಸ್ಥಳೀಯ ಶಾಸಕ ಯು.ಟಿ. ಖಾದರ್ ಭವನ ನಿರ್ಮಾಣಕ್ಜೆ ಸಂಬಂಧಿಸಿದಂತೆ ಯಾವುದೇ ಪ್ರಯತ್ನ ಪಟ್ಟಿಲ್ಲ ಇಲ್ಲಿನ ಜನತೆ ಬಿಜೆಪಿಯನ್ಬು ಗೆಲ್ಲಿಸಿ ನಿಮ್ಮ ಸಮದ್ಯೆ ಬಗೆಹರಿಸಲು ಬಿಜೆಪಿ ಸಿದ್ದವಿದೆ ಎಂದರು.

ಉಳ್ಳಾಲ ವಿಧಾನ ಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಪ್ರತೀ ಗ್ರಾಮಗಳಿಗೆ ಕುಡಿಯುವ ನೀರು ನೀಡಲು ಜಲಜೀವನ್ ಮಿಷನ್ ನಡಿ ಪ್ರದಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅನುದಾನ ಬಿಡುಗಡೆ ಮಾಡಿದ್ದಾರೆ. ದೇಶದಲ್ಲಿ ಹಿಂದು ಮುಸ್ಲಿಂ ಕ್ರೈಸ್ತರು ಸಹೋದರೆತೆಯಿಂದ ಬಾಲಕುವ ಕಲ್ಪನೆ ಬಿಜೆಪಿಯದ್ದು ಆದರೆ ಎಸ್ ಡಿಪಿಐ ಮತ್ತು ಕಾಂಗ್ರೆಸ್ ಜನರ ನಡುವೆ ಕೋಮು ಭಾವನೆ ಕೆರಳಿಸುವ ಕಾರ್ಯ ಮಾಡುತ್ತಿದೆ. ಆದರೆ ಬಿಜೆಪಿ ಆಡಳಿತದಲ್ಲಿ ಎಲ್ಲಾ ಧರ್ಮದವರಿಗೆ ಆದ್ಯತೆ ನೀಡಿದೆ. ಡಾ. ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ , ಜಾರ್ಜ್ ಫೆರ್ನಾಂಡಿಸ್ ಅವರನ್ನು ರಕ್ಷಣಾ ಸಚಿವ ಮಾಡಿರುವುದು ಇದಕ್ಕೆ ಉದಾಹರಣೆಯಾಗಿದೆ. ಇತ್ತಿಚೀನ ದಿನಗಳಲ್ಲಿ ಮುಸ್ಲಿಂ, ಕ್ರೈಸ್ತರು, ದಲಿತರು ಬಿಜೆಪಿಯತ್ತ ಒಲವು ತೋರಿಸುತ್ತಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದತ್ತಾತ್ರೇಯ, ಕಿಶೋರ್ ಉಡುಪಿ, ಬಿಜೆಪಿ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಸತೀಶ್ ಕುಂಪಲ, ಚಂದ್ರಶೇಖರ್ ಉಚ್ಚಿಲ್, ಚಂದ್ರಹಾಸ ಉಳ್ಳಾಲ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಜಯಶ್ರೀ, ಕಸ್ತೂರಿ ಪಂಜ, ದೇವದಾಸ ಶೆಟ್ಟಿ, ರಣದೀಪ್ ಕಾಂಚನ್, ಧನಲಕ್ಷ್ಮೀ ಗಟ್ಟಿ, ಸಂತೋಷ್ ಶೆಟ್ಟಿ ಪುಲ್ಲು, ಹೇಮಂತ್ ಶೆಟ್ಟಿ ದೇರಳಕಟ್ಟೆ, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಯಶವಂತ ಅಮೀನ್, ರವಿಶಂಕರ್ ಸೋಮೇಶ್ವರ, ಫಝಲ್ ಅಸೈಗೋಳಿ, ಸುದರ್ಶನ್ ಭಟ್, ಸುಜಿತ್ ಮಾಡೂರು, ಆನಂದ ಶೆಟ್ಟಿ, ಗಣೇಶ್ ಸುವರ್ಣ, ವಿಠಲ್ ಸಾಲಿಯಾನ್, ಬಾಬು ಬಂಗೇರ, ಸೀತರಾಮ ಕೊಲ್ಯ,ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!