ಹೊಸದಿಗಂತ ವರದಿ ಶಿವಮೊಗ್ಗ :
ರಾಜ್ಯದಲ್ಲಿ ಬಿಜೆಪಿಯವರಿಗೆ ಬಾಲಬಿಚ್ಚಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎಚ್ಚರಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ವಿನಾ ಕಾರಣ ಬಾಂಬ್ ಸ್ಫೋಟ ಮತ್ತು ಪಾಕಿಸ್ತಾನ ಪರ ಘೋಷಣೆಯ ವಿಚಾರಗಳನ್ನು ಎತ್ತುತ್ತಿದ್ದಾರೆ. ಈಗಾಗಲೇ ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ಯಾರೇ ಆಗಲಿ ದೇಶದ್ರೋಹದ ಕೆಲಸ ಮಾಡಿದರೆ, ಅದನ್ನು ಕ್ಷಮಿಸುವುದಿಲ್ಲ. ಹಾಗೆಯೇ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್‌ಎಸ್‌ಎಲ್ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಕ್ರಮ ತೆಗೆದುಕೊಳ್ಳುವಾಗ ಕಾನೂನುನ್ನು ಅನುಸರಿಸಬೇಕು ಎಂದರು.