ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಡಾ.ಶರಣಪ್ರಕಾಶ್ ಹೆಸರು ಹೇಳಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಆತ ಯಾರೆಂದು ನನಗೆ ಗೊತ್ತಿಲ್ಲ ಎಂದುಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆ ವ್ಯಕ್ತಿ ಯಾರಂತ ನನಗೆ ಗೊತ್ತಿಲ್ಲ, ಇದೇ ಮೊದಲ ಬಾರಿಗೆ ನೋಡಿರುವುದು. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ಆತ ಯಾಕೆ ನನ್ನ ಹೆಸರು ಹೇಳಿದ್ದಾನೆ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಸಚಿವರು ಹೇಳಿದರು.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರೋಹಳ್ಳಿ ಗ್ರಾಮದ ಶಿವಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಹಿಂದು ಹುಲಿ, ಹಿಂದುವಾಗಿ ಸಾಯುತ್ತೇನೆ. ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನನ್ನ ಸಾವಿಗೆ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.