ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರನೇ ಸುತ್ತಿನ ಮತದಾನಕ್ಕೆ ಕೆಲವು ದಿನಗಳ ಮೊದಲು, ಪಶ್ಚಿಮ ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಂದಿಗ್ರಾಮ್ನಲ್ಲಿ ಬೈಕ್ನಲ್ಲಿ ಬಂದ ಕೆಲವರು ಮನೆಯ ಮೇಲೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.
ನಿನ್ನೆ (ಬುಧವಾರ) ರಾತ್ರಿ ಕೊಲೆಯಾದ ಮಹಿಳೆ ತನ್ನ ಕಾರ್ಯಕರ್ತೆ ಎಂದು ಬಿಜೆಪಿ ಹೇಳಿಕೊಂಡಿದೆ. ಇಂದು (ಗುರುವಾರ) ಪ್ರದೇಶದಲ್ಲಿ ಪಕ್ಷದ ಪ್ರತಿಭಟನೆಯ ವೇಳೆ ಅಲ್ಲಲ್ಲಿ ಹಿಂಸಾಚಾರದ ವರದಿಗಳು ಬಂದಿವೆ. ನಿನ್ನೆ ರಾತ್ರಿ ಆಕೆಯ ಮನೆಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಕನಿಷ್ಠ ಏಳು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯನ್ನು ಖಂಡಿಸಿ ಇಂದು ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ.