ಬಿಜೆಪಿ ಕಾರ್ಯಕರ್ತನ ಹತ್ಯೆ ಕೇಸ್: ಎಂಟು CPI(M) ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಕಣ್ಣೂರಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸಿಪಿಐ(ಎಂ) ಕಾರ್ಯಕರ್ತರಿಗೆ ಕೇರಳದ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಬಿಜೆಪಿ ಕಾರ್ಯಕರ್ತ ಎಳಂಬಿಲಾಯಿ ಸೂರಜ್ ಹತ್ಯೆ ಪ್ರಕರಣದಲ್ಲಿ ಒಂಬತ್ತು ಸಿಪಿಐ(ಎಂ) ಕಾರ್ಯಕರ್ತರು ತಪ್ಪಿತಸ್ಥರೆಂದು ತಲಶ್ಶೇರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ ಟಿ ನಿಸಾರ್ ಅಹಮ್ಮದ್ ಶುಕ್ರವಾರ ತೀರ್ಪು ನೀಡಿದ್ದರು.
ಇದೀಗ ಎಂಟು ಜನರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50,000 ರೂ. ದಂಡ ವಿಧಿಸಿದರೆ, ಮತ್ತೊಬ್ಬ ಅಪರಾಧಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ.

ಸಿಪಿಐ(ಎಂ) ತೊರೆದು ಬಿಜೆಪಿ ಸೇರಿದ ನಂತರ ರಾಜಕೀಯ ವೈಷಮ್ಯದಿಂದಾಗಿ ಸೂರಜ್‌ನನ್ನು ಕೊಲೆ ಮಾಡಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ.

2012ರಲ್ಲಿ ನಡೆದಿದ್ದ ಟಿಪಿ ಚಂದ್ರಶೇಖರನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಬಂಧನಕ್ಕೊಳಗಾದ ರಾಜೀಶ್ ಪೊಲೀಸರಿಗೆ ನೀಡಿದ ಹೇಳಿಕೆಯನ್ನು ಆಧರಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಜೀಶ್ ಮತ್ತು ಪಿ ಎಂ ಮನೋರಾಜ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!