ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಓರ್ವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ ಪಕ್ಷದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಪಕ್ಷದ ಕಚೇರಿಯಲ್ಲಿ ನಸ್ಕರ್ ಅವರ ರಕ್ತಸಿಕ್ತ ಶವ ಪತ್ತೆಯಾಗಿದೆ.
ಕಾರ್ಯಕರ್ತನ ಹತ್ಯೆ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಕೊಲೆಗೆ ಸಂಬಂಧಿಸಿದಂತೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಹತ್ಯೆಯು ವೈಯಕ್ತಿಕ ವಿಚಾರವಾಗಿರಬಹುದು ಎಂದು ಪೊಲೀಸರು ಹೇಳಿದ್ದಾರೆ.