ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ತೆಸ್‌ನವ್ರು ಇಲ್ಲಸಲ್ಲದ ಹೇಳಿಕೆ ಕೊಡ್ತಿದ್ದಾರೆ. ವಿನಯ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಅದೊಂದು ಕೊಲೆ, ಶಾಸಕರ ವಿರುದ್ಧ ಇನ್ನು ಕೂಡ ಎಫ್ಐಆರ್ ದಾಖಲಾಗಿಲ್ಲ, ಇದರ ಹಿಂದೆ ಯಾರೆಲ್ಲ ಇದ್ದಾರೆ ಅಂತ ಎಲ್ಲರಿಗೂ ಗೊತ್ತಿದೆ. ಅವರಿಗೆ ಶಿಕ್ಷೆ ಆಗಲೇಬೇಕು ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಕಿಡಿಕಾರಿದ್ದಾರೆ.