ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಷ್ಠೀಕರಣ ರಾಜಕಾರಣ ಖಂಡಿಸಿ ಡಿಕೆ ಶಿವಕುಮಾರ್ ವಿರುದ್ಧ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸದನದಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಾಗೂ ಡಿಕೆಶಿ ತುಷ್ಠೀಕರಣ ನೀತಿ ರಾಜಕಾರಣ ಖಂಡಿಸಿ ಬೀದರ್ ನಗರದ ಅಂಬೇಡ್ಕರ್ ವೃತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಇದೇ ವೇಳೆ ಡಿಕೆ ಶಿವಕುಮಾರ್ ಪ್ರತಿಕೃತಿ ಸುಟ್ಟು, ಕಾಲಿನಿಂದ ಒದ್ದು ಆಕ್ರೋಶ ಹೊರಹಾಕಿದ್ದಾರೆ, ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದು, 200ಕ್ಕೂ ಅಧಿಕ ಜನ ಬಿಜೆಪಿ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.