ಬಾಲಕಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿ ಯುವ ಮುಖಂಡ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಬಳ್ಳಾರಿಯ ಬಿಜೆಪಿ ಮುಖಂಡ ದೇವು ನಾಯಕ್ ನನ್ನು ಸಿರುಗುಪ್ಪ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!