ಹೊಸದಿಗಂತ ವರದಿ, ಹಾಸನ :
ಅನುದಾನ ತಾರತಮ್ಯ ಖಂಡಿಸಿ ಪ್ರತ್ಯೇಕ ದೇಶ ನಿರ್ಮಾಣ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ ವಿರುದ್ಧ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಮೋರ್ಚಾ ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಜಮಾಯಿಸಿ, ಸಂಸದ ಡಿ.ಕೆ.ಸುರೇಶ್ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಅನ್ನು ಟೀಕಿಸುವ ಬರದಲ್ಲಿ ಕೇಂದ್ರದ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಂಸದ ಡಿ.ಕೆ.ಸುರೇಶ್ ಹಾಗೂ ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿ ಡಿ.ಕೆ.ಸುರೇಶ್‌ರ ಸಂಸತ್ ಸ್ಥಾನ ದಿಂದ ವಜಾ ಮಾಡುಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕಡೆ ಮನವಿ ಸಲ್ಲಿಸಿದರು.
ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹರ್ಷಿತ್ ಮಾತನಾಡಿ, ಸಂಸದರಾದ ಡಿ.ಕೆ. ಸುರೇಶ್ ರವರು ಇತ್ತಿಚಿಗೆ ಕೊಟಂತಹ ಹೇಳಿಕೆ ದೇಶವನ್ನು ಉತ್ತರ ಮತ್ತು ದಕ್ಷಿಣ ಭಾರತವಾಗಿ ವಿಭಜಿಸಬೇಕಾಗುತ್ತದೆ ಎಂದು ಹೇಳಿರುವ ಹೇಳಿಕೆ ದೇಶದ ಐಕ್ಯತೆಯನ್ನು ಹೊಡೆಯುವಂತಹ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಒಂದು ಐಡಿಯಾಲಜಿ ಹೇಗಿದೆ ಎಂದರೇ ಅವರಿಗೆ ಹಣ ಸಿಗಲಿಲ್ಲ ಹಾಗೂ ಸರಿಯಾದ ರೀತಿಯಲ್ಲಿ ವ್ಯವಸ್ಥೆ ಆಗಲಿಲ್ಲ ಎಂದು ಹೇಳಿ ದೇಶವನ್ನು ಹೊಡೆಯುತ್ತಾರೆ ಮತ್ತು ಸಮಾಜವನ್ನು ಹೊಡೆಯುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಅದೆ ಮನಸ್ಥಿತಿಯಲ್ಲಿ ಜವಬ್ಧಾರಿಯುತ ಸಂಸದರಾಗಿ ಡಿ.ಕೆ. ಸುರೇಶ್ ಅವರು ಇಂತಹ ಹೇಳಿಕೆ ಕೊಟ್ಟಿದ್ದಾರೆ. ಕೇಂದ್ರದಿoದ ನರೇಂದ್ರ ಮೋದಿಯವರು ಕೊಟ್ಟಿರುವ ಅನುಧಾನದಲ್ಲಿ ತಾರತಮ್ಯ ಆಗಿದೆ ಎಂದು ಹೇಳಿರುವುದರ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಕೇಂದ್ರದಿoದ ರಸ್ತೆ, ರೈಲ್ಷೆ ಕಾಮಗಾರಿ ಇರಬಹುದು ವಿಮಾನ ನಿಲ್ದಾಣದ ಅಭಿವೃದ್ಧಿ ಸೇರಿದಂತೆ ಯಾವುದು ತಾರತಮ್ಯವಾಗಿರುವುದಿಲ್ಲ. ಇದರ ವಿರುದ್ಧ ದೇಶವನ್ನು ಹೊಡೆಯುವ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ಯುವ ಮೋರ್ಚಾದಿಂದ ತೀವ್ರತರವಾಗಿ ಖಂಡಿಸುತ್ತೇವೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಇಂತಹ ಹೇಳಿಕೆ ನೀಡಿರುವ ಸಂಸದರನ್ನು ತಕ್ಷಣ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅನೂಪ್, ಮುಖಂಡರಾದ ರಾಕೇಶ್, ರಘು, ಗಿರೀಶ್, ರಾಜೇಶ್, ಮುರುಳೀ, ವಿನೋದ್ ಕುಟ್ಟಿ, ತೇಜಸ್ಸು, ವಿಜಯಲಕ್ಷಿö್ಮ, ರತ್ನ ಪ್ರಕಾಶ್, ಶೋಭಾ ಸೇರಿದಂತೆ ಇತರರು ಹಾಜರಿದ್ದರು.