ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಭರ್ತೃಹರಿ ಮಹತಾಬ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಒಡಿಶಾ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಎಕ್ಸ್‌ ಮಾಡಿರುವ ಸಚಿವರು, ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕರ್ ಆಗಿ ನೇಮಿಸಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಂಗಾಮಿ ಸ್ಪೀಕರ್ ಸಹಾಯಕ್ಕೆ ಸುರೇಶ್ ಕೋಡಿಕುನ್ನಿಲ್, ತಾಳಿಕ್ಕೋಟ್ಟೈ ರಾಜುತೇವರ್ ಬಾಲು, ರಾಧಾ ಮೋಹನ್ ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಸುದೀಪ್ ಬಂದೋಪಾಧ್ಯಾಯ ಇವರುಗಳನ್ನು ನೇಮಕ ಮಾಡಲಾಗಿದೆ. ಹೊಸ ಸ್ಪೀಕರ್ ಆಯ್ಕೆವರೆಗೂ ಕಾರ್ಯ ನಿರ್ವಹಣೆ ಮಾಡಲಿದ್ದಾರೆ ಎಂದು ರಿಜಿಜು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!