ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ, ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಬಂದು ಪ್ರಚಾರ ಮಾಡಿದ್ರೂ ಗೆಲ್ಲಲಾಗಲಿಲ್ಲ.ಬಿಜೆಪಿಯವರ ಲೆಕ್ಕಾಚಾರ ತಲೆಕೆಳಗಾಗಿದೆ. ಮೋದಿ ಎಲ್ಲೆಲ್ಲೆ ಪ್ರಚಾರ ಮಾಡಿದ್ದಾರೋ ಅಲ್ಲೆಲ್ಲಾ ಬಿಜೆಪಿ ಸೋತಿದೆ. ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದರು.

ನಮಗೆ ಆಶೀರ್ವಾದ ಮಾಡಿದ ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮಗೆ ಪ್ರತಿ ಬಾರಿಯೂ ಶೇಕಡವಾರು ಮತಗಳು ಹೆಚ್ಚಾಗುತ್ತಿವೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 42.88 ರಷ್ಟು ಮತಗಳು ಬಂದಿದ್ದಾವೆ. ರಾಜ್ಯದ ಜನರು ಸಂಪೂರ್ಣವಾಗಿ ಬಿಜೆಪಿ, ಜೆಡಿಎಸ್ ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!