ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಶೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಜೊತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ – ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು