ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂಡಿಘಡ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಹರ್ಪೀತ್ ಕೌರ್ ಬಬ್ಲಾ ಆಯ್ಕೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷ ಆಡಳಿತವಿರುವ ಪಂಜಾಬ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
36 ಸದಸ್ಯರ ಬಲವುಳ್ಳ ಚಂಡಿಘಡ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಹರ್ಪ್ರೀತ್ ಕೌರ್ ಬಬ್ಲಾ 19 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
ಆಮ್ ಆದಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮೂವರು ಸದಸ್ಯರು ಅಡ್ಡ ಮತದಾನ ಮಾಡಿದ್ದಾರೆ ಎಂದು ಹೇಳಲಾಗಿದೆ.