Monday, August 8, 2022

Latest Posts

ಪಾಲಿಕೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಬಿಜೆಪಿ ಮಡಿಲಿಗೆ : ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಕಲಬುರಗಿ:

ಕಲಬುರಗಿ ಮಹಾ ನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ವಾಡ೯ ನಂ-12 ಬಿಜೆಪಿ ಅಭ್ಯರ್ಥಿ ಪರವಾಗಿ ನಗರದ ಎಪಿಎಂಸಿ ಕಚೇರಿಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಪಾಲಿಕೆ ಚುನಾವಣೆಯಲ್ಲಿ 30ಕ್ಕಿಂತ ಅಧಿಕ ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿ ಗಳು ಗೆಲುವು ಸಾಧಿಸುವ ಮೂಲಕ ಪಾಲಿಕೆ ಗದ್ದುಗೆ ಎರಲಿದ್ದಾರೆ ಎಂದರು. ನಗರದ ಎಲ್ಲಾ ವಾಡ೯ಗಳಲ್ಲಿ ಉತ್ತಮ ವಾದ ಮತದಾನ ನಡೆಯುತ್ತಿದ್ದು,ಬೆಳಿಗ್ಗೆ ಸ್ವಲ್ಪ ಮಟ್ಟಿಗೆ ಮಂದಗತಿಯಲ್ಲಿ ಮತದಾನ ಹೊರತು ಪಡಿಸಿದರೆ, ಮಧ್ಯಾಹ್ನ ಸಮಯದಿಂದ ಚೆನ್ನಾಗಿ ಮತದಾನ ನಡೆಯುತ್ತಿದೆ ಎಂದರು.

ಕಾಂಗ್ರೆಸ್ ಕಾಯ೯ಕತ೯ರ ಮೇಲೆ ಹಲ್ಲೆ ಸಂಬಂಧಿಸಿದಂತೆ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಬಿಜೆಪಿ ಪಕ್ಷವು ಯಾರ ಕೈಗೊಂಬೆಯಾಗಿಯೂ ಕೆಲಸ ಮಾಡುತ್ತಿಲ್ಲ ಎಂದರು. ಈ ಸಂದರ್ಭದಲ್ಲಿ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಅವರ ಕುಟುಂಬದ ಸದಸ್ಯರು ಮತದಾನದ ದಿನದಂದು ತಮ್ಮ ಹಕ್ಕನ್ನು ಚಲಾಯಿಸಿದರು. ವಾಡ೯ ನಂ- 12ರ ಬಿಜೆಪಿ ಅಭ್ಯರ್ಥಿ ವಿಠ್ಠಲ ಜಾಧವ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss