ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಯಾರು ಹಾಗೂ ರಾಜ್ಯಾಧ್ಯಕ್ಷ ಯಾರು ಎನ್ನುವ ಬಗ್ಗೆ ತೀರ್ಮಾನವಾಗಲಿದೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ಈಗಾಗಲೇ ತಿಂಗಳಾಗಿದೆ, ಇನ್ನೂ ಬಿಜೆಪಿಯ ವಿಪಕ್ಷ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇಂದು ಬಿಜೆಪಿ ನೂತನ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆ ಕರೆದಿದ್ದು, ಇಂದು ಸಂಜೆ ಸಭೆ ನಡೆಯಲಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆಯಾಗಲಿದೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂಬತ್ತು ಪೂರೈಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳು, ಕೇಂದ್ರದ ಯೋಜನೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಬಗ್ಗೆ ಚರ್ಚೆಯಾಗಲಿದೆ.