ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಕ್ಯಾ.ಬ್ರಜೇಶ್ ಚೌಟಗೆ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಬಿಜೆಪಿಯ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಆರ್‌ ಪದ್ಮರಾಜ್‌ ಸೋಲು ಕಂಡಿದ್ದಾರೆ.

ಕಾಂಗ್ರೆಸ್‌ನ ಆರ್ ಪದ್ಮರಾಜ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಮತಗಳ ಭಾರಿ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಈಗಾಗಲೇ ಚೌಟ ಗೆಲುವಿನ ಸಂಭ್ರಮದಲ್ಲಿ ತೊಡಗಿದ್ದು, ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವಯುಗ ನವಪಥದ ಆಧಾರದಲ್ಲಿ, ಹಿಂದುತ್ವದ ಬದ್ಧತೆಯಲ್ಲಿ, ಅಭಿವೃದ್ಧಿಯನ್ನು ಆದ್ಯತೆಯಾಗಿಸಿ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸುತ್ತೇನೆ ಎಂದು ಚೌಟ ಹೇಳಿದರು.

ಇದು ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು. ಸತ್ಯ, ಧರ್ಮ, ನ್ಯಾಯ, ಹಿಂದುತ್ವದ ಆಧಾರದಲ್ಲಿ ನಾವು ಜಿಲ್ಲೆಯಲ್ಲಿ ಸ್ಪರ್ಧಿಸಿದ್ದೆವು. ತುಳುನಾಡಿನ ದೈವ, ದೇವರ ಆಶೀರ್ವಾದದ ಬಲದಿಂದ, ಕಾರ್ಯಕರ್ತರ ಪರಿಶ್ರಮ, ಸಂಘಟನೆಯ ಹಿರಿಯರ ಮಾರ್ಗದರ್ಶನದಿಂದ, ರಾಜ್ಯ ಹಾಗೂ ಕೇಂದ್ರದ ನಾಯಕರ ಬೆಂಬಲದೊಂದಿಗೆ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!