May 4, 2026
Monday, May 4, 2026
spot_img

ಬಂಗಾಳ, ಅಸ್ಸಾಂ, ಪಾಂಡಿಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವು: ಮುಗಿಲುಮುಟ್ಟಿದ ಕಾರ್ಯಕರ್ತರ ಸಂಭ್ರಮಾಚರಣೆ

ಹೊಸದಿಗಂತ ವರದಿ ಬೀದರ್:

ಪಶ್ಚಿಮ ಬಂಗಾಳ, ಅಸ್ಸಾಂ, ಹಾಗೂ ಪಾಂಡಿಚೇರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ರಾಜಕೀಯ ಇತಿಹಾಸ ಸೃಷ್ಟಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಗೆಲುವಿನ ನಗೆ ಬೀರಿದ್ದು, ತಮ್ಮ ಪಕ್ಷದ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಬೀದರಿನಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪ್ರಧಾನಿ ಮೋದಿ ನೇತೃತ್ವದಲ್ಲಿ ಜನರ ನಂಬಿಕೆ:

ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪಾಂಡಿಚೇರಿ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಎಲ್ಲಾ ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜನರು ದೃಢ ನಂಬಿಕೆ ಇಟ್ಟಿದ್ದಾರೆ ಎನ್ನಲು ಈ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಔರಾದ್ ಶಾಸಕ ಪ್ರಭು ಚವ್ಹಾಣ ಹೊಸ ದಿಗಂತಕ್ಕೆ ಮಾತನಾಡಿ ಪ್ರತಿಕ್ರಿಯಿಸಿದರು.

ದಮನಶಾಹಿಗಳ ಸೋಲು:

ಇಂದು ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪಾಂಡಿಚೇರಿ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಮನಶಾಹಿಗಳ ಮುಖಕ್ಕೆ ಚಾಟಿ ಏಟು ನೀಡಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದೂರದೃಷ್ಟಿಯ ನೇತೃತ್ವದಲ್ಲಿ ಜನರು ಭರವಸೆ ವ್ಯಕ್ತಪಡಿಸಿದ್ದಾರೆ ಇದು ದೇಶದ ಅಖಂಡತೆಯ ಗೆಲುವು ಸಮಸ್ತ ಹಿಂದೂಗಳ ಗೆಲುವು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೊಸ ದಿಗಂತಕ್ಕೆ ಮಾತನಾಡಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:

ಇಂಡಿಯಾ ಅಲಾಯಂನ್ಸ್ ಪಕ್ಷಗಳು ದೇಶದಲ್ಲಿ ಭರವಸೆ ಕಳೆದುಕೊಂಡಿವೆ:

ಕಾಂಗ್ರೆಸ್ ನೇತೃತ್ವದ ಇಂಡಿಯಾ ಅಲಾಯಂನ್ಸ್ ಪಕ್ಷಗಳ ಮೇಲಿನ ಭರವಸೆ ಜನರು ಕಳೆದುಕೊಂಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಂಬಿಕೆ ಇಟ್ಟಿರುವ ಕಾರಣ ಬಿಜೆಪಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪಾಂಡಿಚೇರಿ ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಮುಂಬರುವ 2028ರ ಕರ್ನಾಟಕ ಚುನಾವಣೆಗೂ ಈ ಚುನಾವಣೆ ದಿಕ್ಸೂಚಿ ಆಗಲಿದೆ. ಭ್ರಷ್ಟಾಚಾರ, ಇಸ್ಲಾಮಿಕ್ ಮನಸ್ಥಿತಿಯವರು ಹಿಂದೂಗಳ ಮೇಲಿನ ಅತ್ಯಾಚಾರಕ್ಕೆ ತಕ್ಕ ಉತ್ತರ ಕೋಟ್ಟಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಹೊಸ ದಿಗಂತಕ್ಕೆ ಹೇಳಿದ್ದಾರೆ.

ಸುಳ್ಳು ಪ್ರಚಾರ ಮಾಡಿದ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಿರ್ನಾಮದ ಆರಂಭ:

ಸುಳ್ಳು ಪ್ರಚಾರ ಮಾಡಿ ಜನರನ್ನು ಮರಳು ಮಾಡಿ ಕಳೆದ ಮೂರು ಚುನಾವಣೆಗಳಲ್ಲಿ ಅಧಿಕಾರದ ಗದ್ದುಗೆ ಏರಿದ್ದ ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರ ಅತಿಯಾದ ಅಹಂ ಹಾಗೂ ದುರಾಡಳಿತದ ಕಾರಣ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮೇಲೆ ಜನರು ಭರವಸೆ ಇಟ್ಟು ಸಂಪೂರ್ಣ ಬಹುಮತ ನೀಡಿದ್ದು, ಅದೇ ರೀತಿ ಅಸ್ಸಾಂ ಹಾಗೂ ಪಾಂಡಿಚೇರಿ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ದೇಶದಲ್ಲಿ ಮೋದಿ ಹಾಗೂ ಬಿಜೆಪಿ ಅಲೆ ಇರುವ ಬಗ್ಗೆ ಈ ಜನಾದೇಶ ಮತ್ತೊಮ್ಮೆ ಖಾತ್ರಿ ಪಡಿಸಿದೆ. ಮುಂಬರುವ 2028ರ ಕರ್ನಾಟಕ ಚುನಾವಣೆಗೆ ಈಗಿನ ಚುನಾವಣೆ ಫಲಿತಾಂಶ ದಿಕ್ಸೂಚಿ ಆಗಲಿದೆ ಎಂದು ಶಾಸಕ ಶರಣು ಸಲಗಾರ ಹೊಸದಿಗಂತಕ್ಕೆ ಪ್ರತಿಕ್ರಿಯಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !