ಸುಳ್ಳಿನಿಂದ ತುಂಬಿದೆ ಬಿಜೆಪಿ ಪ್ರಣಾಳಿಕೆ: ಕಾಂಗ್ರೆಸ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯ ಹಿನ್ನೆಲೆ ಬಿಜೆಪಿ (BJP) ಬಿಡುಗಡೆ ಮಾಡಿದ ಪ್ರಣಾಳಿಕೆಗೆ (Manifesto) ಕಾಂಗ್ರೆಸ್ (Congress) ಅಸಮಾಧಾನ ವ್ಯಕ್ತಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳು ‘ಸುಳ್ಳಿನಿಂದ ತುಂಬಿವೆ’ ಮತ್ತು ‘ವಿಶ್ವಾಸಾರ್ಹವಲ್ಲ’ ಎಂದು ಆರೋಪಿಸಿದೆ.

ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಣದುಬ್ಬರ ಮತ್ತು ನಿರುದ್ಯೋಗ ಬಿಜೆಪಿಯ ಪ್ರಣಾಳಿಕೆಯಿಂದ ಕಾಣೆಯಾಗಿದೆ ಎಂದು ಹೇಳಿದ್ದಾರೆ. ಜನರ ಜೀವನಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಸಹ ಬಿಜೆಪಿ ಬಯಸುವುದಿಲ್ಲ. ಆದರೆ ಈ ಬಾರಿ ಯುವಕರು ಪ್ರಧಾನಿ ಮೋದಿಯವರ (Narendra Modi) ಬಲೆಗೆ ಬೀಳುವುದಿಲ್ಲ. ಅವರು ಈಗ ಕಾಂಗ್ರೆಸ್‌ನ ಕೈಗಳನ್ನು ಬಲಪಡಿಸುತ್ತಾರೆ ಮತ್ತು ದೇಶದಲ್ಲಿ ‘ಉದ್ಯೋಗ ಕ್ರಾಂತಿ’ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಸಂಕಲ್ಪ ಪತ್ರ ಕೇವಲ ತೋರ್ಪಡಿಕೆ. ಅವರ ನಿಜವಾದ ಪ್ರಣಾಳಿಕೆ ‘ಸಂವಿಧಾನ್ ಬದ್ಲೋ ಪತ್ರ’ (ಸಂವಿಧಾನ ಬದಲಿಸಿ ಪತ್ರ) ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದರು. ಬಿಜೆಪಿಯವರು ದೇಶ, ಸಮಾಜ, ಪ್ರಜಾಪ್ರಭುತ್ವದ ವಿರುದ್ಧ ಈ ಎಲ್ಲ ಷಡ್ಯಂತ್ರಗಳನ್ನು ತಳಮಟ್ಟದಿಂದ ಪ್ರಾರಂಭಿಸುತ್ತಾರೆ. ಆರಂಭದಲ್ಲಿ ಉನ್ನತ ನಾಯಕರು ಜನರ ಮುಂದೆ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ರಾತ್ರಿಯಲ್ಲಿ ಅವರು ಸಂವಿಧಾನವನ್ನು ನಾಶಮಾಡಲು ಸ್ಕ್ರಿಪ್ಟ್ ಬರೆಯುತ್ತಾರೆ. ನಂತರ ಸಂಪೂರ್ಣ ಅಧಿಕಾರ ಸಿಕ್ಕ ನಂತರ ಸಂವಿಧಾನದ ಮೇಲೆ ದಾಳಿ ನಡೆಸುತ್ತಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಅವರು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಬಿಜೆಪಿಯ ಪ್ರಣಾಳಿಕೆಯನ್ನು ನಂಬಲು ಸಾಧ್ಯವಿಲ್ಲ . ಪಿಎಂ ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದರು. ಅವರು ಎಂಎಸ್‌ಪಿ ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಅಂತಹ ಯಾವುದೇ ದೊಡ್ಡ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!