ಮಹಾರಾಷ್ಟ್ರ ಚುನಾವಣೆ ಸಂದರ್ಭ ಬಿಜೆಪಿಯ ಮ್ಯಾಚ್ ಫಿಕ್ಸಿಂಗ್: ರಾಹುಲ್ ಬಾಂಬ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಚುನಾವಣೆಯ ಸಂದರ್ಭ ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವಂತೆ ಸಜ್ಜುಗೊಳಿಸಲಾಗಿತ್ತು. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅದೇ ತಂತ್ರಗಳನ್ನು ಬಿಜೆಪಿ ಪುನರಾವರ್ತಿಸಬಹುದು ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಇದೇ ಪೋಸ್ಟ್‌ನಲ್ಲಿ ಪತ್ರಿಕೆಯೊಂದರಲ್ಲಿ ಪ್ರಕಟವಾದ ತಮ್ಮ ಅಭಿಪ್ರಾಯದ ಲೇಖನವನ್ನು ಕೂಡಾ ಅವರು ಹಂಚಿಕೊಂಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಹೇಗೆ ದುರುಪಯೋಗಪಡಿಸಿಕೊಂಡಿತು ಎಂಬುದನ್ನು ನನ್ನ ಲೇಖನವು ಹಂತ ಹಂತವಾಗಿ ತೋರಿಸುತ್ತದೆ, ಅಂತಹ ಕ್ರಮಗಳು ಚುನಾವಣಾ ವಿಶ್ವಾಸಕ್ಕೆ ಘಾಸಿ ತರುತ್ತದೆ. ಫಲಿತಾಂಶದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ನಾಶಮಾಡುತ್ತವೆ ಎಂದು ರಾಹುಲ್ ಬರೆದುಕೊಂಡಿದ್ದಾರೆ.
ಮಹಾರಾಷ್ಟ್ರದ ‘ಮ್ಯಾಚ್ ಫಿಕ್ಸಿಂಗ್’ ಮುಂದೆ ಬಿಹಾರಕ್ಕೆ ಬರುತ್ತದೆ, ಅಲ್ಲಿ ಬಿಜೆಪಿ ಸೋಲುತ್ತದೆ ಎಂದು ಗೊತ್ತಾದರೆ ಮ್ಯಾಚ್ ಫಿಕ್ಸಿಂಗ್ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!