ಇಂದಿನಿಂದ ಬಿಜೆಪಿ ʼಜನಾಕ್ರೋಶ ಕಹಳೆʼ ಆರಂಭ; ಹಳೇ ಮೈಸೂರು ಭಾಗದಿಂದಲೇ ಯಾತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ‘ಜನಾಕ್ರೋಶ ಯಾತ್ರೆ’  ಕೈಗೊಂಡಿದೆ. ಇಂದು ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ.

ಸಂಜೆ 4 ಗಂಟೆಗೆ ಮೈಸೂರು ಲಷ್ಕರ್ ಮೊಹಲ್ಲಾದ ಅಂಚೆ ಕಚೇರಿ ಬಳಿಯಿಂದ ಯಾತ್ರೆ ಆರಂಭಗೊಳ್ಳಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಅಶೋಕ ರಸ್ತೆಯಲ್ಲಿ ಸಾಗಿ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಯಲಿದೆ. ಯಾತ್ರೆಯ ನಂತರ ಗಾಂಧಿ ವೃತ್ತದ ಬಳಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ.

ಈ ಜನಾಕ್ರೋಶ ಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿರೋಧ ಪಕ್ಷದ ವಿಧಾನ ಪರಿಷತ್ತಿನ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್, ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಟಿ ರವಿ, ರವಿಕುಮಾರ್, ಮಾಜಿ ಸಚಿವರಾದ ಬಿ ಶ್ರೀರಾಮುಲು, ಸಂಸದ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಭೈರತಿ ಬಸವರಾಜ್, ಟಿಎಸ್ ಶ್ರೀವತ್ಸ, ಪ್ರೀತಮ್ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!