ಮುಸ್ಲಿಮರ ಮೀಸಲಾತಿ ರದ್ದತಿ ವಿಚಾರದಲ್ಲಿ ಬಿಜೆಪಿಯ ನಿಲುವು ಬದಲಾಗೋದಿಲ್ಲ; ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಸ್ಲಿಮರ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ವಿಚಾರದಲ್ಲಿ ಬಿಜೆಪಿ ದೃಢವಾಗಿದೆ. ನಮ್ಮ ನಿಲುವು ಅಚಲವಾಗಿದ್ದು, ಹಿಂದಕ್ಕೆ ಹೋಗುವ ಮಾತಿಲ್ಲ. ಈ ವಿಚಾರಕ್ಕೆ ಸಂಬಂಧಿಸಿ ಚೆಂಡು ಈಗ ಕಾಂಗ್ರೆಸ್ ಅಂಗಳದಲ್ಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮುಸ್ಲಿಂ ಕೋಟಾ ವಿಚಾರ ಸದ್ಯ ಸುಪ್ರೀಂ ಕೋರ್ಟ್​​ನಲ್ಲಿದೆ. ಹಾಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದರು.

ನಾವು ಮುಸ್ಲಿಂ ಕೋಟಾವನ್ನು ರದ್ದುಗೊಳಿಸುತ್ತೇವೆ ಅಥವಾ ಅದನ್ನು ಮುಂದುವರಿಸುತ್ತೇವೆ ಎಂದು ಸುಪ್ರೀಂ ಕೋರ್ಟ್‌ಗೆ ಯಾವತ್ತೂ ಹೇಳಿರಲಿಲ್ಲ. ನಮ್ಮ ನಿರ್ಧಾರವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರ ಆಪ್ತ ರವಿವರ್ಮ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸಿದ್ದರಾಮಯ್ಯನವರ ಆಗ್ರಹದ ಮೇರೆಗೆ ಅವರು ಹಾಗೆ ಮಾಡಿದ್ದರು. ನ್ಯಾಯಾಲಯ ಇನ್ನಷ್ಟೇ ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕಿದೆ. ನಮ್ಮ ವಾದವನ್ನು ನಾವು ನ್ಯಾಯಾಲಯದಲ್ಲಿ ಮಂಡಿಸುತ್ತೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!