July 29, 2026
Wednesday, July 29, 2026
spot_img

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಬ್ಬರ: ತಮಿಳುನಾಡಿನಲ್ಲಿ ನಟ ವಿಜಯ್‌ ಹೊಸ ಇತಿಹಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಶಕಗಳ ಟಿಎಂಸಿ ಆಡಳಿತಕ್ಕೆ ಪಶ್ಚಿಮ ಬಂಗಾಳದ ಜನತೆ ಅಂತ್ಯ ಹಾಡುತ್ತಿರುವ ಸೂಚನೆಗಳು ಲಭ್ಯವಾಗುತ್ತಿವೆ. ಸದ್ಯದ ಟ್ರೆಂಡ್‌ಗಳ ಪ್ರಕಾರ, ಬಿಜೆಪಿ 165 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭಾರಿ ಬಹುಮತದತ್ತ ದಾಪುಗಾಲು ಹಾಕುತ್ತಿದೆ. ಆಡಳಿತಾರೂಢ ಟಿಎಂಸಿ 123 ಸ್ಥಾನಗಳಿಗೆ ಸೀಮಿತವಾಗುವ ಸಾಧ್ಯತೆ ದಟ್ಟವಾಗಿದೆ.

ಅಸ್ಸಾಂನಲ್ಲಿ ಬಿಜೆಪಿ ತನ್ನ ಅಧಿಪತ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಲ್ಲಿ ಬಿಜೆಪಿ ಮೈತ್ರಿಕೂಟ 95 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸರ್ಕಾರ ರಚನೆಯನ್ನು ಖಚಿತಪಡಿಸಿಕೊಂಡಿದೆ. ಕಾಂಗ್ರೆಸ್ ಕೇವಲ 29 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಲು ಶಕ್ತವಾಗಿದೆ.

ಕೇರಳದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾಗುವ ಸಂಪ್ರದಾಯ ಮತ್ತೆ ಮುಂದುವರಿದಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ 100 ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದರೆ, ಅಧಿಕಾರದಲ್ಲಿದ್ದ ಎಡಪಕ್ಷಗಳ ಮೈತ್ರಿಕೂಟ 39 ಸ್ಥಾನಗಳಲ್ಲಿ ಮಾತ್ರ ಹಿನ್ನಡೆ ಅನುಭವಿಸುತ್ತಿದೆ.

ದಕ್ಷಿಣ ಭಾರತದ ರಾಜಕೀಯದಲ್ಲಿ ಇದು ಅತ್ಯಂತ ದೊಡ್ಡ ತಿರುವು. ಚೊಚ್ಚಲ ಬಾರಿಗೆ ಚುನಾವಣೆ ಎದುರಿಸಿದ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು 109 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಡಿಎಂಕೆ ಮತ್ತು ಎಐಎಡಿಎಂಕೆ ಅಂತಹ ದೈತ್ಯ ಪಕ್ಷಗಳಿಗೆ ಆಘಾತ ನೀಡಿದೆ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಶಕೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !