ಗುಜರಾತ್ ನಲ್ಲಿ ಬಿಜೆಪಿ ಗೆಲುವು: ದೇಶ ಮುನ್ನಡೆಸುವ ಶಕ್ತಿ ಮೇಲೆ ಜನ ವಿಶ್ವಾಸ ಎಂದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗುಜರಾತ್ ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದು ರಾಜ್ಯದಲ್ಲಿ ಸುಶಾಸನದ ಫಲ, ಜನತೆ ಬೆಂಬಲ ನೀಡುತ್ತಾರೆ ಎಂಬುದಕ್ಕೆ ಸಾಕ್ಷಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,ಇದುವರೆಗೂ ದೇಶದಲ್ಲಿ ಆಡಳಿತ ವಿರೋಧಿ ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. ಆಡಳಿತದ ಪರವಾಗಿ ಜನ ನಿಲ್ಲಬೇಕು ಎಂದರೆ ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ. ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಹಾಗೂ ನಾಯಕತ್ವ. ದೇಶ ಮುನ್ನಡೆಸುವ ಶಕ್ತಿ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!