ವಿಜಯಪುರ ಪಾಲಿಕೆಯಲ್ಲಿ ಬಿಜೆಪಿ ಜಯಭೇರಿ: ಕಾರ್ಯಕರ್ತರಿಂದ ವಿಜಯೋತ್ಸವ

ಹೊಸದಿಗಂತ ವರದಿ, ವಿಜಯಪುರ:

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಯಿತು.

ನಗರದ ಗೋದಾವರಿ ಹೋಟೆಲ್ ಬಳಿಯಿಂದ ಸಿದ್ಧೇಶ್ವರ ದೇವಸ್ಥಾನದ ವರೆಗೂ ವಿಜಯೋತ್ಸವ ಹಮ್ಮಿಕೊಂಡಿದ್ದು, ವಿಜಯೋತ್ಸವದಲ್ಲಿ ವಿವಿಧ ಕಲಾ ತಂಡಗಳು ಭಾಗಿದ್ದವು.

ವಿಜಯೋತ್ಸವಯುದ್ದಕ್ಕೂ ಜೈ ಶ್ರೀರಾಮ, ಜೈ ಶ್ರೀರಾಮ ಘೋಷಣೆ ಮೊಳಗುತ್ತಿತ್ತು. ಕಾರ್ಯಕರ್ತರು ಬಿಜೆಪಿ, ಹಿಂದೂ ಧ್ವಜ ಹಿಡಿದು ಕುಣಿತದು ಕುಪ್ಪಳಿಸಿದರು.

ಅಬ್ಬರದ ಡಿಜೆ ಸೌಂಡ್‌ಗೆ ಕಾರ್ಯಕರ್ತರು, ನಾಯಕರು ಕುಣಿದು ಸಂಭ್ರಮಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಪಿ. ರಾಜೀವ, ಅಭಯ ಪಾಟೀಲ, ಮುಖಂಡರಾದ ಚಂದ್ರಶೇಖರ ಕವಟಗಿ, ಬಸವರಾಜ ಬಿರಾದಾರ,ವಮಲ್ಲಿಕಾರ್ಜುನ ಜೋಗೂರ, ವಿಜಯ ಜೋಶಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!