ಜಾತಿ ಜನಗಣತಿ ವರದಿ ಜಾರಿ ಮಾಡ್ಲೇಬೇಕು.. ಸರ್ಕಾರಕ್ಕೆ ಬಿ.ಕೆ.ಹರಿಪ್ರಸಾದ್ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಜಾತಿ ಗಣತಿ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ಅ. 7ರಂದು ಹಾಲಿ ಹಾಗೂ ಮಾಜಿ ಹಿಂದುಳಿದ ವರ್ಗಗಳ ಶಾಸಕರನ್ನು ಭೇಟಿ ಮಾಡಿ ಜಾತಿ ಗಣತಿ ವರದಿ ಜಾರಿಗೆ ಒತ್ತಾಯಿಸಿದ್ದೆವು. ಆಗ ಸಿಎಂ 18ರಂದು ಸಚಿವ ಸಂಪುಟಕ್ಕೆ ಪರಿಚಯಿಸುವುದಾಗಿ ತಿಳಿಸಿದರು. ವರದಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಕೆಲ ಸಮುದಾಯದ ಮುಖಂಡರು ವಿರೋಧ ಮಾಡಿದ್ದಾರೆ. ಈ ಸಂಬಂಧ ಎರಡು ಸಮುದಾಯಗಳ ಸಭೆ ಕರೆದಿದ್ದೇನೆ. ಭೂ ಸುಧಾರಣಾ ಕಾಯ್ದೆ, ಬ್ಯಾಂಕ್‌ಗಳ ರಾಷ್ಟ್ರೀಕರಣ ಸಂದರ್ಭದಲ್ಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಪ್ರಜಾಪ್ರಭುತ್ವದಲ್ಲಿ ಒತ್ತಡ ಬರೋದು ಸಹಜ. ಜಾತಿಗಣತಿ ವರದಿಯನ್ನ ಜಾರಿಗೆ ತರಲೇಬೇಕು ಎಂದು ಬಿ.ಕೆ. ಹರಿಪ್ರಸಾದ್ ಒತ್ತಾಯಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!