spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಕಳ್ಳ ಬೇಟೆಗಾರರ ಗುಂಡೇಟಿಗೆ ಮೂವರು ಪೊಲೀಸ್‌ ಅಧಿಕಾರಿಗಳು ಬಲಿ, ಆರೋಪಿಗಳ ಬಂಧನಕ್ಕೆ ಬಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುನಾ ಜಿಲ್ಲೆಯ ಸಾಗ ಬರ್ಖೇಡಾ ಗ್ರಾಮದಲ್ಲಿ ಮೂವರು ಪೊಲೀಸ್ ಅಧಿಕಾರಿಗಳನ್ನು ಕಳ್ಳ ಬೇಟೆಗಾರರು ಗುಂಡಿಕ್ಕಿ ಕೊಂದಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮಧ್ಯಪ್ರದೇಶದ ಸಾಗ ಬರ್ಖೇಡ ಬಳಿಯ ಅರಣ್ಯದಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಲು ಬಂದ ಕಳ್ಳ ಬೇಟೆಗಾರರನ್ನು ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಕಳ್ಳ ಬೇಟೆಗಾರರು ಮೂವರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ರಾಜ್‌ಕುಮಾರ್ ಜಾತವ್, ಹೆಡ್ ಕಾನ್‌ಸ್ಟೆಬಲ್ ಸಂತ ರಾಮ್ ಮೀನಾ ಮತ್ತು ಕಾನ್ಸ್‌ಟೇಬಲ್ ನೀರಜ್ ಭಾರ್ಗವ ಸಾವನ್ನಪ್ಪಿದ್ದಾರೆ.

ಘಟನೆ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಆಘಾತ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಬೇಟೆಗಾರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸಂತಾಪ ಸೂಚಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸ್ವತಃ ಘಟನೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವುದಾಗಿ ಮುಖ್ಯಮಂತ್ರಿ ಕಚೇರಿ ಪ್ರಕಟಿಸಿದೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap