ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕಲಬುರಗಿ:
ಬ್ಲ್ಯಾಕ್ ಫಂಗಸ್ ರೋಗದ ಲಕ್ಷಣಗಳನ್ನು ಜನ ಸಾಮಾನ್ಯರು ಕೂಡ ಗುರುತಿಸಬಹುದಾಗಿದ್ದು, ಇನ್ನೂ ಪ್ರಾರಂಭಿಕ ಹಂತದಲ್ಲಿದೆ ಎಂದು ಕಲಬುರಗಿ ಸಂಸದ ಡಾ.ಉಮೇಶ್ ಜಾಧವ ಹೇಳಿದ್ದಾರೆ.
ಅವರು ಸೋಮವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,ಆಂಟಿ ಫಂಗಸ್ ಟ್ಯಾಬ್ಲೆಟ್ ಈಗಾಗಲೇ ಮುಂಬೈನಿಂದ ತರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ರೋಗ ಲಕ್ಷಣಗಳಿರುವ ಇಬ್ಬರು ರೋಗಿಗಳಿಗೆ ಆಂಟಿ ಫಂಗಸ್ ಟ್ಯಾಬ್ಲೆಟ್ ನೀಡಲಾಗಿದೆ ಎಂದು ತಿಳಿಸಿದರು.