ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ಮೈಸೂರು:
ಜಿಲ್ಲೆಯಲ್ಲಿ ಒಂದೆಡೆ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಿಗದೆ ಆರ್ಭಟಿಸುತ್ತಲೇ ಇದ್ದರೆ, ಮತ್ತೊಂದೆಡೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 84 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಂಡುಬಂದಿದೆ.
ಈ ಪೈಕಿ 13 ಗುಣಮುಖರಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. 61 ಮಂದಿ ಸಕ್ರಿಯ ಸೋಂಕಿತರಿಗೆ ನಗರದ ಕೆ.ಆರ್.ಆಸ್ಪತ್ರೆ, ಜೆಎಸ್ಎಸ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.