ಅಮೆರಿಕಾದಲ್ಲಿ ನಿಲ್ಲದ ಗುಂಡಿನ ದಾಳಿ: 13ಮಂದಿ ಸಾವು, 20ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕದಲ್ಲಿ ನಡೆಯುತ್ತಿರುವ ಸರಣಿ ಗುಂಡಿನ ದಾಳಿಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ. ಎರಡು ದಿನಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ 13 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ವಿಸ್ಕಾನ್ಸಿನ್‌ನ ಮಿಲ್ವಾಕಿಯಲ್ಲಿರುವ ಬಾಸ್ಕೆಟ್‌ಬಾಲ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಯಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶನಿವಾರ ಸಂಜೆ, ಬಂದೂಕುಧಾರಿಯೊಬ್ಬ ನ್ಯೂಯಾರ್ಕ್‌ನ ಬಫಲೋ ಸೂಪರ್‌ಮಾರ್ಕೆಟ್‌ಗೆ ನುಗ್ಗಿ ಜನರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಹತ್ತು ನಾಗರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸೂಪರ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿಕೋರನನ್ನು ಬಂಧಿಸಿದ್ದಾರೆ. ಯೋಧನ ವೇಷದಲ್ಲಿ ಬಂದೂಕು ಹಿಡಿದು ಸೂಪರ್ ಮಾರ್ಕೆಟ್ ಗೆ ನುಗ್ಗಿದ ದುಷ್ಕರ್ಮಿ ಅಲ್ಲಿದ್ದವರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಎಫ್‌ಬಿಐ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಜನಾಂಗೀಯ ದ್ವೇಷದಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ದಾಳಿಕೋರರು ಬಾಯ್ಬಿಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಸಾವಿಗೀಡಾದ ನಾಗರಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!