Monday, August 15, 2022

Latest Posts

ಕೋವಿಡ್ 2ನೇ ಅಲೆ: ಐತಿಹಾಸಿಕ ಶರಣಬಸವೇಶ್ವರ ಜಾತ್ರೆಗೆ ಕರಿ ನೆರಳು

ಹೊಸದಿಗಂತ ವರದಿ, ಕಲಬುರಗಿ:‌‌

ದೇಶದಲ್ಲಿ ಅದರಲ್ಲೂ ನೆರೆಯ ರಾಜ್ಯಗಳಲ್ಲಿ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರಮುಖ ರಸ್ತೆಗಳಲ್ಲಿ ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.

ಜಿಲ್ಲೆಯ ಆಳಂದ ತಾಲೂಕಿನ ಹಿರೋಳ್ಳಿ, ಖಜೂರಿ, ನಿಂಬಾಳ ಹಾಗೂ ಅಫಜಲಪೂರ ತಾಲೂಕಿನ ಬಳ್ಳೂರಗಿ, ಮಾಶಾಳ ನಲ್ಲಿ ಕೋವಿಡ್-19 ನೆಗೆಟಿವ್ ವರದಿ ಇಲ್ಲದಿರುವ ವ್ಯಕ್ತಿಗಳನ್ನು ಜಿಲ್ಲೆಯೊಳಗೆ ಪ್ರವೇಶ ನೀಷೇಧಿಸಿ ಜಿಲ್ಲಾಧಿಕಾರಿ ವಿವಿ ಜೋತ್ಸ್ನಾ ಅವರು ಅದೇಶ ಹೊರಡಿಸಿದ್ದಾರೆ.

ನಿನ್ನೆ ನಡೆದ ಕೋವಿಡ್ -19 ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟುವ ಸಂಬಂಧ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ನಡೆಯುವ ಜಾತ್ರೆ ಹಾಗೂ ಉತ್ಸವಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ನಡೆಯುವ ಶ್ರೀ ಶರಣಬಸವೇಶ್ವರ ಜಾತ್ರೆಗೆ ಕೂಡ ಈ ಬಾರಿ ಕೋವಿಡ್ ಕರಿನೆರಳು ಬಿದಿದ್ದು, ಜಾತ್ರೆ ಸರಳವಾಗಿ ನಡೆಯುವ ಸಾಧ್ಯತೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss