Sunday, December 21, 2025

ಬೆಂಗಳೂರಿಂದ ಹೊರಟ ಬ್ಲ್ಯಾಕ್‌ಬಕ್‌: ರಾಜ್ಯ ಸರ್ಕಾರ ಮಧ್ಯಪ್ರವೇಶಕ್ಕೆ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹದಗೆಟ್ಟ ರಸ್ತೆಗಳು ಮತ್ತು ಸಂಚಾರ ದಟ್ಟಣೆ ಸಮಸ್ಯೆಗಳನ್ನು ಉಲ್ಲೇಖಿಸಿ ಆನ್‌ಲೈನ್ ಟ್ರಕ್ಕಿಂಗ್ ಪ್ಲಾಟ್‌ಫಾರ್ಮ್ ಬ್ಲ್ಯಾಕ್‌ಬಕ್ ಬೆಂಗಳೂರಿನ ಹೊರ ವರ್ತುಲ ರಸ್ತೆಯ(ಒಆರ್‌ಆರ್) ಬೆಳ್ಳಂದೂರಿನಲ್ಲಿರುವ ತನ್ನ ಪ್ರಸ್ತುತ ಕಚೇರಿಯನ್ನು ಸ್ಥಳಾಂತರಿಸುವುದಾಗಿ ಹೇಳಿದ ನಂತರ ಬೆಂಗಳೂರಿನ ಕೆಲವು ಉದ್ಯಮಿಗಳು ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ನಗರದ ಐಟಿ ಕಾರಿಡಾರ್‌ಗಳಲ್ಲಿ ಒಂದಾದ ಒಆರ್‌ಆರ್ ಆಗಾಗ್ಗೆ ಸಂಚಾರ ದಟ್ಟಣೆಗೆ ಸಾಕ್ಷಿಯಾಗುತ್ತದೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರು, ಇದು ಬೆಂಗಳೂರಿನ ಆಡಳಿತದ “ದೊಡ್ಡ ವೈಫಲ್ಯ” ಎಂದು ಟೀಕಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತ ಮಹೇಶ್ವರ ರಾವ್ ಅವರು ಮಧ್ಯಪ್ರವೇಶಿಸಬೇಕು ಎಂದು ಕೋರಿದ್ದಾರೆ.

error: Content is protected !!